ರಾಮಮಂದಿರದಂತೆ ಅಯೋಧ್ಯೆಯಲ್ಲಿ ರೈಲು ನಿಲ್ದಾಣ : ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ

ಲಖನೌ :  ಅಯೋಧ್ಯೆಯ ರೈಲು ನಿಲ್ದಾಣವನ್ನು ರಾಮ ಮಂದಿರದ ಮಾದರಿಯಲ್ಲೇ ಮಾಡಬೇಕು ಎಂದು ಕೇಂದ್ರ ಸಚಿವ ಮನೋಜ್ ಸಿನ್ಹಾ ರೈಲ್ವೇ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಇತ್ತೀಚೆಗಷ್ಟೇ ಅಯೋಧ್ಯೆಯ ರೈಲು ನಿಲ್ದಾಣವನ್ನು ಪುನರ್‌ ನಿರ್ಮಾಣ ಮಾಡಬೇಕು ಎಂದು ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮನೋಜ್‌ ಸಿನ್ಹಾ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಹಳೆಯದಾಗಿರುವ ಕೆಲ ರೈಲು ನಿಲ್ದಾಣಗಳನ್ನು 200 ಕೋಟಿ ರೂ ವೆಚ್ಚದಲ್ಲಿ ಪುನರ್ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಒಟ್ಟು 80 ಕೋಟಿ ವೆಚ್ಚದಲ್ಲಿ ಅಯೋದ್ಯೆ ರೈಲು ನಿಲ್ದಾಣವನ್ನು ಪುನರ್‌ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಿಸಿದೆ.

ಆ ರೈಲು ನಿಲ್ದಾಣ ಪ್ರವಾಸಿಗರಿಗೆ ಮೆಚ್ಚುಗೆಯಾಗುವಂತೆ ಇರಬೇಕು. ಅದು ರಾಮಮಂದಿರದ ಮಾದರಿಯಲ್ಲೇ ನಿರ್ಮಾಣವಾಗಬೇಕು ಎಂದು ಮನೋಜ್‌ ಸಿನ್ಹಾ ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com