ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪಾಪಿಗಳು ಇಂಥಾ ಕ್ರೂರ ಕೃತ್ಯ ಮಾಡಿದ್ರು!

ಕೋಲ್ಕತ್ತಾ : ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಪ್ರಕರಣದ ಮಾದರಿಯಲ್ಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬುಡಕಟ್ಟು ಜನಾಂಗದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು ಬಳಿಕ ಆಕೆಯ ಗುಪ್ತಾಂಗದೊಳಗೆ ಕಬ್ಬಿಣದ ರಾಡನ್ನು ತೂರಿ ಕ್ರೂರತೆ ಮೆರೆದಿದ್ದಾರೆ.
ಅತ್ಯಾಚಾರಕ್ಕೊಳಗಾದ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ಕೆಲ ವರ್ಷಗಳ ಹಿಂದೆ ಮದುವೆಯಾಗಿತ್ತು. ಆದರೆ ಆಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದು ಆಕೆಯ ಗಂಡ ವಿಚ್ಛೇದನ ನೀಡಿ ಈಕೆಯಿಂದ ದೂರವಿದ್ದ. ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದಳು ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ರಾಮ್‌ ಪ್ರಬೇಶ್‌ ಹಾಗೂ ಅಂಧಾರು ಬರ್ಮನ್‌ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಫೆಬ್ರವರಿ 18ರಂದು ಸಂತ್ರಸ್ತೆ ಸಮಾರಂಭವೊಂದಕ್ಕೆ ಹೋಗಿ ವಾಪಸ್ಸಾಗುತ್ತಿದ್ದಳು. ಈ ವೇಳೆ ಕಾಮುಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆ ಗುಪ್ತಾಂಗದೊಳಗೆ ಕಬ್ಬಿಣದ ರಾಡು ತುರುಕಿ ಅಲ್ಲಿಂದ ಪರಾರಿಯಾಗಿದ್ದಾರೆ. ಬಳಿಕ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಮಹಿಳೆಯ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ವೈದ್ಯರು ಹೇಳಿದ್ದಾರೆ. ಆರೋಪಿಗಳ ವಿಚಾರಣೆ ತೀವ್ರಗತಿಯಲ್ಲಿ ಸಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com