BBMP ಕಚೇರಿಗೆ ಪೆಟ್ರೋಲ್‌ ಸುರಿದು ಧಮ್ಕಿ ಹಾಕಿದ್ದ ಕಾಂಗ್ರೆಸ್‌ನ ನಾರಾಯಣಸ್ವಾಮಿ ಬಂಧನ

ಬೆಂಗಳೂರು : ಅಕ್ರಮವಾಗಿ ಜಮೀನು ಖಾತೆ ಮಾಡಿಕೊಡಲು ನಿರಾಕರಿಸಿದ್ದಕ್ಕಾಗಿ ಬಿಬಿಎಂಪಿ ಕಚೇರಿಗೆ ನುಗ್ಗಿ ಕಂದಾಯ ಅಧಿಕಾರಿಯ ಮೇಲೆ ಗೂಂಡಾಗಿರಿ ತೋರಿ ಕಚೇರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚುವ ಬೆದರಿಕೆಯೊಡ್ಡಿದ್ದ ಕಾಂಗ್ರೆಸ್‌ ಮುಖಂಡ ನಾರಾಯಣ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ಜಮೀನು ಖಾತೆಯನ್ನು ಮಾಡಿಕೊಡಲು ನಿರಾಕರಿಸಿದ್ದಕ್ಕೆ ಸಿಎಂ ಹಾಗೂ ಶಾಸಕ ಭೈರತಿ ಬಸವರಾಜು ಆಪ್ತ ನಾರಾಯಣ ಸ್ವಾಮಿ, ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪ ಅವರ ಮೇಲೆ ದರ್ಪ ತೋರಿ ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದರು.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,ನಾರಾಯಣಸ್ವಾಮಿ ತಪ್ಪು ಮಾಡಿದ್ರೆ ಕೂಡಲೇ ಬಂಧಿಸಿ ಎಂದು ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಮಮೂರ್ತಿ ನಗರ ಪೊಲೀಸರು ನಾರಾಯಣಸ್ವಾಮಿಯನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com