JDS ಗೆ ಕೈಕೊಟ್ಟು ಕಮಲ ಹಿಡಿಯಲಿದ್ದಾರೆ ಮಲ್ಲಿಕಾರ್ಜುನ ಖೂಬಾ..?

ಬೀದರ್‌ : ಜೆಡಿಎಸ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮತ್ತೊಬ್ಬ ಶಾಸಕ ಜೆಡಿಎಸ್‌ಗೆ ಗುಡ್‌ ಬೈ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬೀದರ್‌ ಜಿಲ್ಲೆಯ ಬಸವ ಕಲ್ಯಾಣದ ಶಾಸಕ ಮಲ್ಲಿಕಾರ್ಜುನ ಖೂಬಾ ಈ ಬಾರಿ ಜೆಡಿಎಸ್‌ನಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಅಲ್ಲದೆ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದೂ ಹೇಳಿದ್ದಾರೆ. ಈ ಮೂಲಕ ಪಕ್ಷ ಬಿಡುವ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಖೂಬಾ ಅವರು ಫೆಬ್ರವರಿ 25ರಂದು ಅಮಿತ್ ಶಾ ಅನುಭವ ಮಂಟಪ ಭೇಟಿ ವೇಳೆ ಸಾಂಕೇತಿಕವಾಗಿ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳೂ ಕೇಳಿಬರುತ್ತಿವೆ. ಕೆಲ ದಿನಗಳ ಹಿಂದೆ ಬಸವ ಉತ್ಸವದ ವೇಳೆ ಖೂಬಾ ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com