Kerala : ಮರಕ್ಕೆ ಕಟ್ಟಿ ಥಳಿಸಿ ಬುದ್ಧಿಮಾಂದ್ಯ ವ್ಯಕ್ತಿಯ ಕೊಲೆ : ದುಷ್ಕರ್ಮಿಗಳಿಂದ ಕೃತ್ಯದ Selfie..!

ಬುದ್ಧಿಮಾಂದ್ಯ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿ ಕೊಂದ ಘಟನೆ ಕೇರಳದ ಪಾಲಕ್ಕಡ್ ಜಿಲ್ಲೆಯ ಅಟ್ಟಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ಕಿಡಿಗೇಡಿಗಳು ಕೃತ್ಯದ ವೇಳೆ ಸೆಲ್ಫೀಯನ್ನು ಸಹ ಕ್ಲಿಕ್ಕಿಸಿಕೊಂಡಿದ್ದಾರೆ.

ಅಂಗಡಿಯಿಂದ ಚಿಕ್ಕ ಪುಟ್ಟ ವಸ್ತುಗಳನ್ನು ಕಳವು ಮಾಡುತ್ತಿದ್ದ ಎಂಬ ಆರೋಪದ ಮೇಲೆ 27 ವರ್ಷದ ಬುದ್ಧಿಮಾಂದ್ಯ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾದ 7 ಜನ ಆರೋಪಿಗಳನ್ನು ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪೋಲೀಸರು ಶೋಧ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ.

 

 

Leave a Reply

Your email address will not be published.