Vote for Job : ನಿರುದ್ಯೋಗಿಗಳಿಂದ JDS ಹಾಗೂ BJP ಕಚೇರಿ ಎದುರು ಉಪವಾಸ ಸತ್ಯಾಗ್ರಹ

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಇದೇ ಸಂದರ್ಭದಲ್ಲಿ ರಾಜ್ಯದ ಯುವಕರು ನಿರುದ್ಯೋಗ ಸಮಸ್ಯೆ ನಿವಾರಿಸಿದರೆ ಮಾತ್ರ ತಾವು ಮತ ಹಾಕುವುದಾಗಿ ವೋಟ್‌ ಫಾರ್‌ ಜಾಬ್‌ ಎಂಬ ಅಭಿಯಾನ ಆರಂಭಿಸಿದ್ದಾರೆ.

ಇಷ್ಟು ದಿನ ಯುವಕರ ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ, ಅವರ ಉದ್ಯೋಗಕ್ಕೆ ಭದ್ರತೆ ಒದಗಿಸುತ್ತೇವೆ ಎಂಬ ಭರವಸೆ ನೀಡಿ, ಕೊನೆಗೂ ಅವರ ಬೆನ್ನಿಗೆ ನಿಲ್ಲದ ಜೆಡಿಎಸ್‌ ಹಾಗೂ ಬಿಜೆಪಿ ಕಚೇರಿ ಎದುರು ನಿರುದ್ಯೋಗ ಪದವೀಧರರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಶುಕ್ರವಾರ ಬೆಳಗ್ಗೆಯಿಂದಲೇ ವೋಟ್‌ ಫಾರ್ ಜಾಬ್‌ ಸಂಘಟನೆಯ ಯುವಕರು ಬಿಜೆಪಿ ಹಾಗೂ ಜೆಡಿಎಸ್‌ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಈ ಎರಡೂ ಪಕ್ಷಗಳೂ ನಮ್ಮ ಸುಳ್ಳು ಭರವಸೆ ನೀಡಿ ಮೋಸ ಮಾಡುತ್ತಿವೆ. ಆದ್ದರಿಂದ ತಾವು ಈ ರೀತಿಯಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಸದ್ಯ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆಯಾಗಿಲ್ಲ. ಅವರ ಪ್ರಣಾಳಿಕೆ ಬಿಡುಗಡೆಯಾದ ಮೇಲೆ, ಅವರ ಬದ್ದತೆ ಏನು ಎಂಬುದು ತಿಳಿದ ಮೇಲೆ ಅವರ ವಿರುದ್ಧ ಪ್ರತಿಭಟನೆ ನಡೆಸಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com