ರೈತಬಂಧು ಯಡಿಯೂರಪ್ಪ ಹುಟ್ಟುಹಬ್ಬದ ದಿನ ರೈತ ಸಮಾವೇಶ ಮಾಡ್ತೀವಿ : ಶೋಭಾ ಕರಂದ್ಲಾಜೆ

ದಾವಣಗೆರೆ : ಯಡಿಯೂರಪ್ಪ ಜನ್ಮ ದಿನದ ಪ್ರಯುಕ್ತ ದಾವಣಗೆರೆಯಲ್ಲಿ ರೈತ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ರಾಜ್ಯದ ರೈತರ ಪರ ಭಾಷಣ ಮಾಡಲಿದ್ದಾರೆ. ಸಂಜೆ ‌4 ಗಂಟೆಗೆ ವೇದಿಕೆಗೆ ಆಗಮಿಸಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಇದೇ ವೇದಿಕೆ ಮೂಲಕ 15 ದಿನಗಳ ಕಾಲ ಮುಷ್ಟಿ ಅಕ್ಕಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಮತ್ತೊಮ್ಮೆ ಯಡಿಯೂರಪ್ಪ ಅಧಿಕಾರಕ್ಕೆ ಬರಬೇಕು ಎಂಬ ಕಾರಣಕ್ಕೆ ಸಮಾವೇಶ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕೆರೆಯಾಗಳಹಳ್ಳಿಯಲ್ಲಿ ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಬಿಎಸ್ವೈ 27 ರಂದು ಭೇಟಿ ನೀಡಿ, ಸಾಂತ್ವನ ಹೇಳಲಿದ್ದಾರೆ. ಮಾಯಕೊಂಡ ವ್ಯಾಪ್ತಿಯ‌ ಕೆರೆಯಾಗಳಹಳ್ಳಿಯ ರಂಗಸ್ವಾಮಿ ಎಂಬ ರೈತ ಇತ್ತೀಚಿಗೆ ಆತ್ಮಹತ್ಯೆಗೆ ಶರಣಾಗಿದ್ರು. ಬಿಎಸ್ವೈ ರಂಗಸ್ವಾಮಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ವೇದಿಕೆಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ರೈತರಿಗೆ ಏನೆಲ್ಲ ಮಾಡ್ತಿವಿ ಅನ್ನೋದನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com