Nidahas Trophy : ಕೊಹ್ಲಿ, ಧೋನಿಗೆ ವಿಶ್ರಾಂತಿ : ರೋಹಿತ್ ಗೆ ನಾಯಕನ ಜವಾಬ್ದಾರಿ

ಮಾರ್ಚ್ 6 ರಿಂದ ಶ್ರೀಲಂಕಾದಲ್ಲಿ ನಡೆಯಲಿರುವ ನಿದಾಹಾಸ್ ಟ್ರೋಫಿ ಟಿ20 ತ್ರಿಕೋನ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ವಿಶ್ರಾಂತಿ ನೀಡಲಾಗಿದೆ.

ವಿರಾಟ್ ಅನುಪಸ್ಥಿತಿಯಲ್ಲಿ ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಶಿಖರ್ ಧವನ್ ಉಪನಾಯಕನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.  ತ್ರಿಕೋನ ಸರಣಿಯಲ್ಲಿ ಶ್ರೀಲಂಕಾ, ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಭಾಗವಹಿಸಲಿವೆ. ಮಾರ್ಚ್ 18 ರಂದು ಫೈನಲ್ ನಡೆಯಲಿದೆ.

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆ.ಎಲ್ ರಾಹುಲ್, ಸುರೇಶ್ ರೈನಾ, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ವಿಜಯ್ ಶಂಕರ್, ಶಾರ್ದೂಲ್ ಠಾಕೂರ್, ಜೈ ದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್, ರಿಷಭ್ ಪಂತ್.

Leave a Reply

Your email address will not be published.

Social Media Auto Publish Powered By : XYZScripts.com