ಪಕ್ಷ ವಿರೋಧಿ ಚಟುವಟಿಕೆ : ಮೈಸೂರು ಮೇಯರ್‌ ಭಾಗ್ಯವತಿ ಕಾಂಗ್ರೆಸ್‌ನಿಂದ ಉಚ್ಛಾಟನೆ

ಮೈಸೂರು : ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದ ಹಿನ್ನೆಲೆಯಲ್ಲಿ ಮೈಸೂರು ಮೇಯರ್‌ ಭಾಗ್ಯವತಿಯವರನ್ನು ಕಾಂಗ್ರೆಸ್‌ನಿಂದ ಉಚ್ಛಾಟನೆ ಮಾಡಲಾಗಿದೆ. ಈ ಕುರಿತು ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಆರ್‌. ಮೂರ್ತಿ ಸುದ್ದಿಗೋಷ್ಠಿ ನಡೆಸಿದ್ದು, ಭಾಗ್ಯವತಿಯವರನ್ನು ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಛಾಟನೆ ಮಾಡಿರುವುದಾಗಿ ಹೇಳಿದ್ದಾರೆ.  ಅಲ್ಲದೆ ಪಾಲಿಕೆ ಸದಸ್ಯತ್ವ ಹಾಗೂ ಮೇಯರ್ ಸ್ಥಾನದಿಂದ ಅವರನ್ನು ವಜಾ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

ಕಳೆದ ಜನವರಿ 24ರಂದು ಮೈಸೂರು ಮೇಯರ್‌ ಪಾಲಿಕೆ ಚುನಾವಣೆ ನಡೆದಿತ್ತು. ಈ ವೇಳೆ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯಾಗಿದ್ದ ಭಾಗ್ಯವತಿ, ಜೆಡಿಎಸ್‌ ಹಾಗೂ ಬಿಜೆಪಿಯ ಬೆಂಬಲದಿಂದ ಗೆದ್ದಿದ್ದರು. ಇನ್ನು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಕಮಲಾ ಉದಯ್‌ ಸೋಲನುಭವಿಸಿದ್ದರು. ಅಡ್ಡದಾರಿ ಹಿಡಿದು ಗೆಲುವು ಸಾಧಿಸಿದ್ದಲ್ಲದೆ ಕಾಂಗ್ರೆಸ್‌ಗೆ ಸೆಡ್ಡುಹೊಡೆದಿದ್ದರು.

 

Leave a Reply

Your email address will not be published.

Social Media Auto Publish Powered By : XYZScripts.com