75ನೇ ವಸಂತಕ್ಕೆ ಕಾಲಿಟ್ಟ ಯಡಿಯೂರಪ್ಪ : ಬೀದರ್‌ನಲ್ಲಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಣೆ

ಬೀದರ್ : ಇಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೀದರ್‌ನ ಹಬ್ಸಿಕೋಟ್‌ ಗೆಸ್ಟ್‌ ಹೌಸ್‌ನಲ್ಲಿ  ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಭಾವಚಿತ್ರವಿರುವ ಕೇಕನ್ನು ಯಡಿಯೂರಪ್ಪ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಭಗವಂತ ಖೂಬಾ, ಶಾಸಕ ಪ್ರಭು ಚಹ್ವಾಣ್, ಬಿಜೆಪಿ ಮುಖಂಡ ಬಾಬು ಅವರು ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ರಾಹುಲ್ ಗಾಂಧಿ ವಿರುದ್ರೈಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ಕಣ್ಣು ತಪ್ಪಿಸಿ ಕೊಂಡು ಹೋಗಿದ್ದಾರೆ. ನಮ್ಮ ಸರ್ಕಾರ ಬಂದ ಬಳಿಕ ಮಹಾದಾಯಿ ವಿವಾದಕ್ಕೆ ಅಂತ್ಯವಾಗುತ್ತದೆ. ಮಹಾದಾಯಿ ವಿವಾದಕ್ಕೆ ಅಂತ್ಯ ಹಾಡುವುದಕ್ಕೋಸ್ಕರ ನಾನು ಸತತ ಪ್ರಯತ್ನ ಮಾಡುತ್ತಿದ್ದೇನೆ. ಮುಂದೆ ಆ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವದು ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com