ಪತ್ನಿಯನ್ನು ಕೊಂದು ಕಿವಿ ಕತ್ತರಿಸಿ ಕಿಸೆಯಲ್ಲಿಟ್ಟುಕೊಂಡ ಪತಿರಾಯ…!

ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ಫತ್ನಿಯ ಶೀಲ ಶಂಕಿಸಿ ಆಕೆಯನ್ನು ಕೊಂದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ದಾಸೇನಹಳ್ಳಿ ಬಳಿ ನಡೆದಿದೆ.

ಮೃತ ಮಹಿಳೆಯನ್ನು ವೆಂಕಟ ಲಕ್ಷ್ಮಮ್ಮ (28) ಎಂದು ಹೆಸರಿಸಲಾಗಿದ್ದು, ಆರೋಪಿ ಪತಿಯನ್ನು ಆದಿನಾರಾಯಣ ಎಂದು ಗುರುತಿಸಲಾಗಿದೆ. ಪತ್ನಿಗೆ ಬೇರೊಬ್ಬನ ಜೊತೆ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಂದು ಬೆಂಕಿ ಹಚ್ಚಿದ್ದಾನೆ. ಬಳಿಕ ಪತ್ನಿಯ ಕಿವಿಗಳನ್ನು ಕತ್ತರಿಸಿಕೊಂಡು ಜೇಬಿನಲ್ಲಿಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ.

ವೆಂಕಟಲಕ್ಷ್ಮಮ್ಮ ಹಾಗೂ ಆದಿನಾರಾಯಣ ದಂಪತಿಗೆ ಇಬ್ಬರು ಮಕ್ಕಳಿದ್ದು, ಆದಿನಾರಾಯಣ ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆದಿನಾರಾಯಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com