BSY ಹೆಸರಿನಲ್ಲಿ ಶೋಭಾ ಕರಂದ್ಲಾಜೆ ಪೂಜೆ : ಭಗವಂತನಲ್ಲಿ ಬೇಡಿಕೊಂಡಿದ್ದೇನು?

ದಾವಣಗೆರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಇಂದು 75ನೆ ವಸಂತಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿಶೇಷ ಪೂಜೆ ನೆರವೇರಿಸಿದ್ದಾರೆ.

ಇಂದು ಶೋಭಾ ಕರಂದ್ಲಾಜೆ ದಾವಣಗೆರೆಯ ದುರ್ಗಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದು, ಇಂದು ಯಡಿಯೂರಪ್ಪ ಅವರ ಹುಟ್ಟುಹಬ್ಬ ಅವರಿಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುವಂತೆ ಅರ್ಚಕರಿಗೆ ತಿಳಿಸಿರುವುದಾಗಿ ಹೇಳಲಾಗಿದೆ.

ಇಂದು ಮಂಗಳವಾರವಾದ ಕಾರಣ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದರೂ ಅವರುಗಳ ಮಧ್ಯೆಯೇ ಶೋಭಾ ಪೂಜೆ ಮಾಡಿಸಿ ದೇವರ ಮುಂದೆ ಐದು ನಿಮಿಷ ಮೌನವಾಗಿ ನಿಂತು ಪ್ರಾರ್ಥನೆ ಸಲ್ಲಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರಿಗೆ ದಾವಣಗೆರೆ ಎಂಪಿಜಿಎಮ್‌ ಸಿದ್ಧೇಶ್ವರ್‌ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಸಾಥ್‌ ನೀಡಿದ್ದರು.

 

Leave a Reply

Your email address will not be published.