ರಮ್ಯಾ ಮಾಡುವ ಟ್ವೀಟ್‌ಗೆ ಇನ್ಮುಂದೆ BJP ಪ್ರತಿಕ್ರಿಯೆ ನೀಡುವುದಿಲ್ಲವಂತೆ..!

ಬೆಂಗಳೂರು : ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ, ಬಿಜೆಪಿ ವಿರುದ್ಧ ಎಷ್ಟೇ ಟ್ವೀಟ್‌ ಮಾಡಿದರೂ ಅದಕ್ಕೆ ಪ್ರತಿಕ್ರಿಯೆ ನೀಡದಿರಲು ಬಿಜೆಪಿ ತೀರ್ಮಾನಿಸಿರುವುದಾಗಿ ತಿಳಿದು ಬಂದಿದೆ.
ಒಂದು ವೇಳೆ ಪ್ರತಿಕ್ರಿಯೆ ನೀಡುವುದಾದರೆ ಸರಳವಾದ ಭಾಷೆಯಲ್ಲೇ ಉತ್ತರಿಸಬೇಕು. ಯಾವುದೇ ಕಾರಣಕ್ಕೂ ರಮ್ಯಾ ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಬಾರದು ಎಂದು ಸೂಚಿಸಲಾಗಿದೆ.
ಈ ಹಿಂದೆ ಪ್ರಧಾನ ಮೋದಿ ವಿರುದ್ದ ರಮ್ಯಾ ಟ್ವೀಟ್‌ ಮಾಡಿದ್ದರು. ಇದರ ವಿರುದ್ದ ಟೀಕೆ ಮಾಡುವ ಭರದಲ್ಲಿ ಬಿಜೆಪಿಯ ಕೆಲ ನಾಯಕರು ರಮ್ಯಾ ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಬಿಜೆಪಿ ನಾಯಕರ ಇಂತಹ ಹೇಳಿಕೆಗಳು ಪಕ್ಷಕ್ಕೆ ಮುಜುಗರ ತರುತ್ತಿದ್ದು, ಮಹಿಳೆಯರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಮ್ಯಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com