Wonder la ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ ನುಗ್ಗಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಸಿಬ್ಬಂದಿ,

ಬೆಂಗಳೂರು : ರಾಮನಗರ ಜಿಲ್ಲೆಯ ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ವಂಡರ್‌ ಲಾ ಸಮೀಪದ ಅರಣ್ಯಕ್ಕೆ ಬೆಂಕಿ ತಗುಲಿದ್ದು, ಈ ವೇಳೆ ಪಾರಾಗುವ ಪ್ರಯತ್ನದಲ್ಲಿದ್ದ ಚಿರತೆ ವಂಡರ್‌ ಲಾಗೆ ನುಗ್ಗಿತ್ತು. ಇದರಿಂದಾಗಿ ವಂಡರ್‌ ಲಾದಲ್ಲಿದ್ದ ಪ್ರವಾಸಿಗರು ಹಾಗೂ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು.
ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, 1 ಗಂಟೆಯ ಕಾರ್ಯಾಚರಣೆಯ ಬಳಿಕ ಅರವಳಿಕೆ ನೀಡಿ ಚಿರತೆಯನ್ನು ಸೆರೆಹಿಡಿಯಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com