ಸರ್ಕಾರಿ ನೌಕರರಿಗೆ ಹೋಳಿ ಹಬ್ಬದ Gift ಕೊಟ್ಟ ಸಿದ್ದರಾಮಯ್ಯ : ವೇತನ ಹೆಚ್ಚಳ ಆದೇಶಕ್ಕೆ ಅಂಕಿತ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಆರನೇ ವೇತನ ಪರಿಷ್ಕರಣೆ ಸಂಬಂಧ ಅಧಿಕೃತ ಆದೇಶಕ್ಕೆ ಸಿಎಂ ಸಿದ್ದರಾಮಯ್ಯ ಅಂಕಿತ ಹಾಕಿದ್ದಾರೆ. ಈ ಕುರಿತ ಅಧಿಕೃತ ಆದೇಶ ಹೊರಬಿದ್ದಿದ್ದು, ಇನ್ನು ಮುಂದೆ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಾಗಲಿದೆ.

ವೇತನ ಆಯೋಗದ ಶಿಫಾರಸ್ಸಿನ ಅನ್ವಯ ನೌಕರರ ವೇತನ ಶೇ.30ರಷ್ಟು ಹೆಚ್ಚಾಗಲಿದೆ. ಶನಿವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಇದಕ್ಕೆ ಮಂಜೂರಾತಿ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

ಮೂಲ ವೇತನಕ್ಕೆ ಶೇ. 30ರಷ್ಟು ತಾರತಮ್ಯ ಸರಿದೂಗಿಸುವ ಮೊತ್ತ ನೀಡಿ ವೇತನವನ್ನು ಪರಷ್ಕರಣೆ ಮಾಡಲಾಗಿದೆ. ಏಪ್ರಿಲ್‌ 1ರಿಂದಲೇ ನೌಕರರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಕನಿಷ್ಟ ಮೂಲ ವೇತನ 17 ಸಾವಿರ ರೂ ಗೆ ನಿಗಧಿ ಮಾಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com