ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ತುಳಿತಕ್ಕೆ ಬಲಿಯಾದ ಮುಖ್ಯ ಅರಣ್ಯಾಧಿಕಾರಿ

ಮೈಸೂರು : ಆನೆ ದಾಳಿಗೆ ನಾಗರಹೊಳೆ ಹುಲಿ ಸಂರಕ್ಷಣಾ ಯೋಜನೆಯ ನಿರ್ದೇಶಕ ಮಣಿಕಂಠನ್‌ ಮೃತಪಟ್ಟಿದ್ದಾರೆ. ನಾಗರಹೊಳೆ ಅರಣ್ಯ ಪ್ರದೇಶದ ಡಿ.ಬಿ ಕುಪ್ಪೆ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.

ಇಂದು ಫೈರ್‌ ಲೈನ್‌ಗಾಗಿ ಮಣಿಕಂಠನ್, ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಸರ್ವೆ ನಡೆಸುತ್ತಿದ್ದು, ಮಣಿಕಂಠನ್ ಕಾಡಿನೊಳಗೆ ಹೋಗಿದ್ದರು. ಈ ವೇಳೆ ಆನೆಯೊಂದು ಏಕಾ ಏಕಿ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗದೆ ಮಣಿಕಂಠನ್‌ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ.

2001 ಎಎಫ್‌ಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದ ಮಣಿಕಂಠನ್‌ ಮೂಲತಃ ತಮಿಳುನಾಡು ಮೂಲದವರಾಗಿದ್ದು, ಈ ಹಿಂದೆ ಅನೇಕ ಜಿಲ್ಲೆಗಳಲ್ಲಿ ಅರಣ್ಯಾಧಿಕಾರಿಯಾಗಿ ಕೆಲಸ ಮಾಡಿದ್ದರು.

ಮಣಿಕಂಠನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com