Uttar Pradesh : ಬಾತ್‌ರೂಂನಲ್ಲಿ ಬೆತ್ತೆಲೆಯಾಗಿದ್ದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಲಖನೌ : ದಂಪತಿಯ ಮೃತದೇಹ ಬೆತ್ತಲಾದ ಸ್ಥಿತಿಯಲ್ಲಿ ಬಾತ್‌ರೂಂನಲ್ಲಿ ಪತ್ತೆಯಾಗಿರುವ ಘಟನೆ ಘಾಜಿಯಾಬಾದ್‌ನ ಇಂದಿರಾಪುರಂನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನೀರಜ್‌ ಸಿಂಘಾನಿಯಾ (38). ಪತ್ನಿ ರುಚಿ (35) ಎಂದು ಹೆಸರಿಸಲಾಗಿದ್ದು, ನಾಲ್ಕು ವರ್ಷಗಳ ಹಿಂದೆ ಇಬ್ಬರೂ ಮದುವೆಯಾಗಿದ್ದು, ಇಂದಿರಾಪುರಂನ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು.

ಶುಕ್ರವಾರ ಹೋಳಿ ಹಬ್ಬ ಆಚರಣೆ ಮಾಡಿ ದಂಪತಿ ಸ್ನಾನಕ್ಕೆ ತೆರಳಿದ್ದ ವೇಳೆ ಬಾತ್‌ರೂಂನಲ್ಲೇ ಮೃತಪಟ್ಟಿದ್ದಾರೆ. ಅನುಮಾನಾಸ್ಪದ ರೀತಿಯಲ್ಲಿ ಇಬ್ಬರೂ ಸಾವಿಗೀಡಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಹೋಳಿ ಬಳಿಕ ಇಬ್ಬರೂ ತಯಾರಾಗಿ ಬರುವುದಾಗಿ ಹೇಳಿ ಕೋಣೆಯೊಳಗೆ ಹೋಗಿದ್ದರು. ಎಷ್ಟು ಹೊತ್ತಾದರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ನೀರಜ್‌ ತಂದೆ ಬಾಗಿಲು ಬಡಿದಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವೆಂಟಿಲೇಟರ್‌ ಮೂಲಕ ಒಳಗೆ ಇಣುಕಿ ನೋಡಿದ್ದಾರೆ. ಆಗ ಇಬ್ಬರು ಬೆತ್ತಲಾಗಿ ನೆಲದ ಮೇಲೆ ಬಿದ್ದಿರುವುದು ಪತ್ತೆಯಾಗಿದೆ. ಬಳಿಕ ಕುಟುಂಬಸ್ಥರು ಬಾಗಿಲು ಮುರಿದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಇಬ್ಬರೂ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಅವರ ಸಾವಿಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಮೃತ ದೇಹಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published.