ಮಲ್ಯ ಆಸ್ಪತ್ರೆಯಿಂದ ವಿದ್ವತ್‌ ಡಿಸ್ಚಾರ್ಜ್‌ : ಹೈಕೋರ್ಟ್‌ ಮೊರೆ ಹೋಗಲು ನಲಪಾಡ್‌ ನಿರ್ಧಾರ

ಬೆಂಗಳೂರು : ಶಾಸಕ ಹ್ಯಾರಿಸ್ ಪುತ್ರ ನಲಪಾಡ್‌ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್‌ ಇಂದು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ವಿದ್ವತ್‌ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ತಡರಾತ್ರಿ ಡಿಸ್ಚಾರ್ಜ್‌ ಮಾಡಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ನಲಪಾಡ್‌ನಿಂದ ತೀವ್ರವಾಗಿ ಹಲ್ಲೆಗೊಳಗಾಗಿದ್ದ ವಿದ್ವತ್‌ ಕಳೆದ 15 ದಿನಗಳಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ವಿದ್ವತ್‌ ಪರಿಸ್ಥಿತಿ ಸುಧಾರಿಸಿದ್ದು, ಕಣ್ಣಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಕಣ್ಣಿನ ಚಿಕಿತ್ಸೆಗಾಗಿ ವಿದ್ವತ್‌ ಅವರನ್ನು ಕೇರಳಕ್ಕೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ.

ಮತ್ತೊಂದೆಡೆ ಅಧೀನ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಲಪಾಡ್‌ ಹೈಕೋರ್ಟ್‌ ಮೊರೆ ಹೋಗುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ.

 

Leave a Reply

Your email address will not be published.