Bangalore : ಕಾಂಗ್ರೆಸ್‌ ಶಾಸಕರ ವಿರೋಧದ ನಡುವೆಯೂ ‘ಕೈ’ ಹಿಡಿದ ಖೇಣಿ

ಬೆಂಗಳೂರು : ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಖೇಣಿ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್‌ ಅವರ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿಯುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಖೇಣಿ, ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕ ಮಕ್ಕಳ ಪಕ್ಷದಿಂದ ಬೀದರ್ ದಕ್ಷಿಣ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಖೇಣಿ, ಬಂಡೆಪ್ಪ ಕಾಶಂಪೂರ್‌ ಅವರನ್ನು ಸೋಲಿಸಿದ್ದರು.

ಒಂದೆಡೆ ಖೇಣಿ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದಂತೆ, ಕಾಂಗ್ರೆಸ್‌ ಶಾಸಕರೇ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಖೇಣಿ ಸೇರ್ಪಡೆ ಬಗ್ಗೆ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂಬುದಾಗಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com