BJP ಹೈಕಮಾಂಡ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲ್ವಂತೆ……!!

ಮೈಸೂರು : ಯಡಿಯೂರಪ್ಪ ಅವರನ್ನು ಬಿಜೆಪಿ ಸಿಎಂ ಮಾಡುವುದಿಲ್ಲ ಎಂದು ಮೈಸೂರು ವಿವಿಯ ಪ್ರಾಧ್ಯಾಪಕ ಪ್ರೊ. ಮಹೇಶ್ಚಂದ್ರ ಗುರು ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮೋದಿ, ಅನಂತ್‌ ಕುಮಾರ್‌ ಹೆಗಡೆಯವರನ್ನು ಮುಖ್ಯಮಂತ್ರಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಸುಮ್ಮನೆ ಇರುವವರ ಸಂಖ್ಯೆ ಹೆಚ್ಚುತ್ತಿದೆ. ಸುಮ್ಮನಿರುವವರೇ ನಿಜವಾದ ದ್ರೋಹಿಗಳು. ಪ್ರಶ್ನೆ ಮಾಡುವ ಮನೋಭಾವವನ್ನೇ ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜನರಲ್ಲಿ ಮೊದಲು ಪ್ರಶ್ನೆ ಉದ್ಭವವಾಗಬೇಕು. ಅದು ಅವರು ಬೆಳೆಯುವ ದಾರಿ. ಸುಮ್ಮನೆ ಇರುವವರೇ ದೇಶಕ್ಕೆ ಮಾರಕ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com