Meghalaya : ನೂತನ ಮುಖ್ಯಮಂತ್ರಿಯಾಗಿ ಕೊನ್ರಾಡ್ ಸಂಗ್ಮಾ ಪ್ರಮಾಣ ವಚನ

ಮೇಘಾಲಯದ ನೂತನ ಮುಖ್ಯಮಂತ್ರಿಯಾಗಿ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಮುಖ್ಯಸ್ಥ ಕೊನ್ರಾಡ್ ಸಂಗ್ಮಾ ಮಂಗಳವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸರ್ಕಾರದ ಸಚಿವರಾಗಿ 11 ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಅಮಿತ್ ಷಾ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನ್ಯಾಷನಲ್ ಪೀಪಲ್ಸ್ ಪಾರ್ಟಿಯ ನೇತೃತ್ವದಲ್ಲಿ ಬಿಜೆಪಿ ಸೇರಿದಂತೆ 5 ಮಿತ್ರ ಪಕ್ಷಗಳು ಒಟ್ಟಾಗಿ ಸರ್ಕಾರ ರಚಿಸಿವೆ. ಕಾಂಗ್ರೆಸ್ ಪಕ್ಷ 21 ಸೀಟುಗಳನ್ನು ಗೆದ್ದಿದ್ದು, ಎನ್ ಪಿಪಿ 19 ಸೀಟುಗಳಲ್ಲಿ ಜಯ ಗಳಿಸಿತ್ತು.

 

Leave a Reply

Your email address will not be published.

Social Media Auto Publish Powered By : XYZScripts.com