ನ್ಯಾ. ವಿಶ್ವನಾಥ್ ಶೆಟ್ಟಿ ಅಪಾಯದಿಂದ ಪಾರು – ಗೃಹ ಸಚಿವ ರಾಮಲಿಂಗರೆಡ್ಡಿ ….

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಮಲಿಂಗರೆಡ್ಡಿ, ವಿಶ್ವನಾಥ ಶೆಟ್ಟಿ ಅವರು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆ ಬಳಿ ತೆರಳಿ ಹೆಚ್ಚಿನ ಮಾಹಿತಿ ಪಡೆದು ವಿವರಗಳನ್ನು ನೀಡುತ್ತೇನೆ ಎಂದು ಹೇಳಿದರು.


ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ರಾಮಲಿಂಗರೆಡ್ಡಿ, ವ್ಯಕ್ತಿಯೊರ್ವ ಲೋಕಾಯುಕ್ತ ಕಚೇರಿಗೆ ಲೋಕಾಯುಕ್ತರನ್ನು ಭೇಟಿ ಮಾಡುವ ಸಂಬಂಧ ತೆರಳಿದ್ದಾರೆ. ಈ ಸಂದರ್ಭದಲ್ಲಿ ಲೋಕಾಯುಕ್ತರ ಮೇಲೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿ ಮಾಹಿತಿ ಪಡೆಯುತ್ತೇನೆ ಎಂದರು.


ಹಾಗೆಯೇ ಆರೋಪಿಯನ್ನು ಬಂಧಿಸಲಾಗಿದ್ದು, ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.

Leave a Reply

Your email address will not be published.

Social Media Auto Publish Powered By : XYZScripts.com