ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಲೋಕಾಯುಕ್ತ ಕಚೇರಿಗೆ ನುಗ್ಗಿದ ತೇಜಸ್ ಶರ್ಮಾ ಎಂಬಾತ ವಿಶ್ವನಾಥ್ ಶರ್ಮಾ ಅವರಿಗೆ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ.

ಆರೋಪಿಯನ್ನು ವಿಧಾನ ಸೌಧ ಪೋಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ವಿಶ್ವನಾಥ್ ಶೆಟ್ಟಿ ಅವರನ್ನು ನಗರದ ಮಲ್ಯ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ದಾಖಲಿಸಲಾಗಿದೆ. ವಿಶ್ವನಾಥ್ ಅವರ ಹೊಟ್ಟೆ ಹಾಗೂ ಎದೆಯ ಭಾಗದಲ್ಲಿ ಗಂಭಿರ ಸ್ವರೂಪದ ಗಾಯಗಳಾಗಿವೆ.

ಪೋಲೀಸರು ಲೋಕಾಯುಕ್ತ ಕಚೇರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com