ವೇತನ ನೀಡದ ಹಿನ್ನೆಲೆ : ಅರಣ್ಯ ಇಲಾಖೆ ಸಿಬ್ಬಂದಿಯ ಕುಟುಂಬದವರ ಪ್ರತಿಭಟನೆ

ದಾವಣಗೆರೆ : ಅರಣ್ಯ ಸಿಬ್ಬಂದಿಗೆ ವೇತನ ನೀಡಿಲ್ಲ ಎಂಬ ಕಾರಣಕ್ಕೆ ಅರಣ್ಯ ಸಿಬ್ಬಂದಿಯ ಕುಟುಂಬಸ್ಥರಿಂದ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ  ಅರಣ್ಯ ಸಿಬ್ಬಂದಿ ನರಸಿಂಹ ಎಂಬುವರಿಗೆ ಕಳೆದ ಆರು ತಿಂಗಳಿಂದಲೂ ವೇತನ ನೀಡಿಲ್ಲ ಎಂಬ ಕಾರಣಕ್ಕೆ ಪ್ರತಿಭಟನೆ ನಡೆಸಲಾಯಿತು.

ನರಸಿಂಹ ಅವರ ಹೆಂಡತಿ ಹಾಗೂ ಮಕ್ಕಳು ಸುಡು ಬಿಸಿಲಿನಲ್ಲಿ ಪ್ರತಿಭಟನೆ ನಡೆಸಿದರು. ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ವಲಯ ಅರಣ್ಯಾಧಿಕಾರಿ ರಾಮಮೂರ್ತಿ ವಿರುದ್ಧ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com