ಇದೇನು ಗೂಂಡಾ ರಾಜ್ಯನಾ…? ಸರ್ಕಾರದ ವಿರುದ್ದ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಆಕ್ರೋಶ…

ಬೆಂಗಳೂರು : ಲೋಕಾಯುಕ್ತ ಕಚೇರಿಯಲ್ಲೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿತ ಪ್ರಕರಣವನ್ನು ಖಂಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ನ್ಯಾಯಮೂರ್ತಿಗೆ ಓರ್ವ ಬಂದು ಚಾಕುವಿನಿಂದ ಇರಿಯುತ್ತಾನೆ ಎಂದರೇ ನಾವು ಯಾವ ರಾಜ್ಯದಲ್ಲಿದ್ದೇವೆ, ಇದೇನು ಗೂಂಡಾ ರಾಜ್ಯಾನಾ…ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ನ್ಯಾ. ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್.ಡಿ ದೇವೇಗೌಡ, ಸರ್ಕಾರ ಲೋಕಾಯುಕ್ತವನ್ನು ಮುಗಿಸಿತು. ಇದೀಗ ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲೆಯೇ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಇದನ್ನು ನೋಡಿದರೆ ನಾವೆಲ್ಲಿದ್ದೇವೆ. ಇದು ಎಂತಹ ರಾಜ್ಯ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಲೋಕಾಯುಕ್ತರಿಗೇ ರಕ್ಷಣೆ ಇಲ್ಲದ ಮೇಲೆ ಮತ್ಯಾರಿಗೆ ಇವರು ರಕ್ಷಣೆ ಕೊಡುತ್ತಾರೆ ಇದೇನು ಗೂಂಡಾ ರಾಜ್ಯನಾ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದು ಕಿಡಿಕಾರಿದರು.

Leave a Reply

Your email address will not be published.

Social Media Auto Publish Powered By : XYZScripts.com