ಆಂಧ್ರಕ್ಕೆ ವಿಶೇಷ ಸ್ಥಾನಮಾನ ವಿವಾದ : TDPಯಿಂದ ಹೊರನಡೆದ ಇಬ್ಬರು BJP ಸಚಿವರು

ಅಮರಾವತಿ : ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ತೆಲುಗು ದೇಶಂ ಪಕ್ಷ ಹಾಗೂ ಕೇಂದ್ರ ಸರ್ಕಾರದ ನಡುವಿನ ಶೀತಲ ಸಮರ ಸ್ಫೋಟಗೊಂಡಿದ್ದು, ಆಂಧ್ರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿದ್ದ ಇಬ್ಬರು ಬಿಜೆಪಿ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆಂಧ್ರ ಪ್ರದೇಶದ ಆರೋಗ್ಯ ಸಚಿವ ಕಮಿನೇನಿ ಶ್ರೀನಿವಾಸ್‌ ಹಾಗೂ ದತ್ತಿ ಸಚಿವ ಪಿಡಿಕೊಂಡಲ ಮಾಣಿಕ್ಯಲಾ ರಾವ್‌ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ನಾಗರಿಕ ವಿಮಾನ ಯಾನ ಸಚಿವ ಪಿ. ಗಜಪತಿ ರಾಜು ಹಾಗೂ ವಿಜ್ಞಾನ ಹಾಗೂ ತಂತ್ರಜ್ಞನಾ ಸಚಿವ ಸೃಜನಾ ಚೌಧರಿ (ಟಿಡಿಪಿ ಸಚಿವರು), ಕೇಂದ್ರ ಸಂಪುಟಕ್ಕೆ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇರುವುದಾಗಿ ಹೇಳಲಾಗುತ್ತಿದೆ.

ಈ ಹಿಂದೆ ಬಿಜೆಪಿ ನಾಯಕ ಪಿ.ವಿ ಎನ್‌ ಮಾಧವನ್‌ , ತೆಲುಗು ದೇಶಂ ಪಕ್ಷದಲ್ಲಿರುವ ನಮ್ಮ ಬಿಜೆಪಿ ಸಚಿವರು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಲ್ಲದೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿದ್ದೇವೆ. ಟಿಡಿಪಿ ಸಂಪುಟದಿಂದ ಬಿಜೆಪಿ ಸಚಿವರು ಹೊರಬಂದ ಬಳಿಕ ಕೇಂದ್ರ ಸರ್ಕಾರ ಮಾಡಿರುವ ಎಲ್ಲಾ ಕಾರ್ಯಗಳನ್ನು ಜನರಿಗೆ ಮುಟ್ಟಿಸುತ್ತೇವೆ. ನಾವು ಆಂಧ್ರಕ್ಕೆ ಯಾವುದೇ ಅನ್ಯಾಯ ಮಾಡಿಲ್ಲ ಎಂದಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com