ಚುನಾವಣೆಯ ಹೊಸ್ತಿಲಲ್ಲೇ ಅನಂತ್‌ ಕುಮಾರ್ ಹಗಡೆ, C.T ರವಿಗೆ ಎದುರಾಯ್ತು ಸಂಕಷ್ಟ…!

ಬೆಂಗಳೂರು : ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್‌ ಹೆಗಡೆ ಹಾಗೂ ಶಾಸಕ ಸಿ.ಟಿ ರವಿ ಅವರಿಗೆ ಹೈಕೋರ್ಟ್‌ ಗುರುವಾರ ನೋಟಿಸ್‌ ಜಾರಿ ಮಾಡಿದೆ.

ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ವಿಚಾರವಾಗಿ ಅನಂತ್‌ ಕುಮಾರ್‌ ಹೆಗಡೆ ಹಾಗೂ ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ಬಿ ಬೂದಿಹಾಳ್‌ ಅವರಿದ್ಧ ಪೀಠ, ಇಬ್ಬರು ಬಿಜೆಪಿ ನಾಯಕರಿಗೆ ನೋಟಿಸ್‌ ಜಾರಿ ಮಾಡುವಂತೆ ಆದೇಶಿಸಿದ್ದು, ವಿಚಾರಣೆಯನ್ನು ಮುಂದೂಡಿದೆ.

ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವ ವೇಳೆ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಿಸಿದರೆ ಕಾರ್ಯಕ್ರಮದ ವೇದಿಕೆಯಲ್ಲೇ ಟಿಪ್ಪು ವಿರುದ್ಧ ಘೋಷಣೆ ಕೂಗುತ್ತೇನೆ ಎಂದು ಈ ಹಿಂದೆ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಅಲ್ಲದೆ ಸಿ.ಟಿ ರವಿ ಸಹ ಕೋಮುಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು.

Leave a Reply

Your email address will not be published.