T20 Cricket : ಸಿಕ್ಸರ್ ಸಿಡಿಸಿ ದಾಖಲೆ ಬರೆದ ಸುರೇಶ್ ರೈನಾ..!

ಕೋಲಂಬೋದಲ್ಲಿ ಗುರುವಾರ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 6 ವಿಕೆಟ್ ಜಯ ಗಳಿಸಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಎಡಗೈ ಬ್ಯಾಟ್ಸಮನ್ ಸುರೇಶ್ ರೈನಾ 27 ಎಸೆತಗಳನ್ನು ಎದುರಿಸಿ 28 ರನ್ ಬಾರಿಸಿದರು.

ಸುರೇಶ್ ರೈನಾ ತಮ್ಮ ಇನ್ನಿಂಗ್ಸ್ ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಈ ಮೂಲಕ ರೈನಾ ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ನಲ್ಲಿ 50 ಸಿಕ್ಸರ್ ಸಿಡಿಸಿದ ಮೂರನೇ ಭಾರತೀಯ ಬ್ಯಾಟ್ಸಮನ್ ಎಂಬ ಖ್ಯಾತಿಗೆ ಸುರೇಶ್ ರೈನಾ ಪಾತ್ರರಾಗಿದ್ದಾರೆ.

50 ಅಥವಾ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಯುವರಾಜ್ (74) ಹಾಗೂ ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ (69) ಇದ್ದಾರೆ. ಮೂರನೇ ಸ್ಥಾನದಲ್ಲಿ ಸುರೇಶ್ ರೈನಾ (50), ನಾಲ್ಕನೇ ಸ್ಥಾನದಲ್ಲಿ ಮಹೇಂದ್ರ ಸಿಂಗ್ ಧೋನಿ (46) 5ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (41) ಇದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com