ಕುಮಾರಸ್ವಾಮಿಯಿಂದ ನಾನು ಪಾಠ ಕಲಿಯುವ ಅಗತ್ಯವಿಲ್ಲ : CM ಸಿದ್ಧರಾಮಯ್ಯ

ಮೈಸೂರು :  ಲೋಕಾಯುಕ್ತ ನ್ಯಾ. ವಿಶ್ವನಾಥ್‌ ಶೆಟ್ಟಿ ಅವರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಒಕ್ಕಲಿಗ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಟಾರ್ಗೆಟ್‌ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ನಾನು ಕುಮಾರಸ್ವಾಮಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದಿರುವ ಸಿಎಂ, ಲೋಕಾಯುಕ್ತರ ಕೊಲೆ ಯತ್ನ ಪ್ರಕರಣದಲ್ಲಿ ನಾನು ಕ್ರಮ ಕೈಗೊಂಡಿಲ್ಲ. ಅಮಾನತು ಮಾಡಿರುವುದು ಗೃಹ ಸಚಿವರು. ಅವರೊಂದಿಗೆ ಏನಾಗಿದೆ ಎಂದು ಕೇಳಿ ತಿಳಿದುಕೊಳ್ಳುವೆ ಎಂದು ಜಾಣ್ಮೆಯ ಉತ್ತರ ನೀಡಿದ್ದಾರೆ.

ಕುಮಾರಸ್ವಾಮಿ ರಾಜಕೀಯಕ್ಕೆ ಬರುವ ಮುಂಚೆ ನಾನು ಮಂತ್ರಿಯಾಗಿದ್ದೆ. ಚುನಾವಣಾ ಸಂದರ್ಭದಲ್ಲಿ ಏನೇನೋ ಸುಳ್ಳು ಹೇಳಿಕೊಂಡು ತಿರುಗಾಡುತ್ತಾರೆ. ಅಧಿಕಾರಿಗಳ ಜೊತೆ ಹೇಗಿರಬೇಕು. ಹೇಗೆ ಕೆಲಸ ಮಾಡಿಸಬೇಕು ಎಂದು ಕುಮಾರಸ್ವಾಮಿಯಿಂದ ಕಲಿಯಬೇಕಿಲ್ಲ. ಅವರಿಗಿಂತ ಮುಂಚೆಯೇ ನಾನು ರಾಜಕೀಯ ಮಾಡಿದ್ದೇನೆ ಎಂದು ಟಾಂಗ್ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com