ಲೋಕಾಯುಕ್ತ ನ್ಯಾ. ವಿಶ್ವನಾಥ್‌ ಶೆಟ್ಟಿ ಮೇಲೆ ಹಲ್ಲೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆ

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ನಡೆದಿರುವ  ಹಲ್ಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಇಂದು ಪ್ರತಿಭಟನೆ ನಡೆಸಲಾಗಿದೆ.  ಕೊಪ್ಪಳದಲ್ಲಿ ಎ.ಬಿ.ವಿ.ಪಿ.ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು,  ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಬಿಜೆಪಿ ಕಾರ್ಯಕರ್ತರು ಇಂದು ಚಾಮ ರಾಜನಗರದಲ್ಲಿ ಪ್ರತಿಭಟನೆ ನಡೆಸಿದ್ದು, ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಎದುರು ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾಮಾಣಿಕ ಅಧಿ ಕಾರಿಗಳ ಹತ್ಯೆಯಾಗಿದೆ. ಅಲ್ಲದೆ ನಿತ್ಯವೂ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಳ ಹಾಗೂ ಹತ್ಯೆಗೆ ಯತ್ನಗಳು ನಡೆಯುತ್ತಿವೆ. ಹೀಗಿದ್ದರೂ ಸರ್ಕಾರ ಇದನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಗೃಹ ಮಂತ್ರಿ ರಾಮಲಿಂಗಾ ರೆಡ್ಡಿ ಕೂಡಲೆ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಮತ್ತೊಂದೆಡೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಳ್ಳಾರಿ ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಒಬ್ಬ ಲೋಕಾಯುಕ್ತರ ಮೇಲೆ ಅವರ ಕಛೇರಿಯಲ್ಲಿಯೇ ಹಲ್ಲೆ ಮಾಡಿದ್ದಾರೆ ಇದು ತೀರ ಖಂಡನೀಯ ಆದ್ದರಿಂದ ಸಿಎಂ ಸಿದ್ದರಾಮಯ್ಯ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು,ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com