ಪಾಕ್‌ ಮಾಜಿ ಪ್ರಧಾನಿ ನವಾಜ್ ಷರೀಫ್‌ ಮೇಲೆ ಶೂ ಎಸೆತ : ವಿದ್ಯಾರ್ಥಿ Arrest

ಇಸ್ಲಾಮಾಬಾದ್‌ : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ವಿದ್ಯಾರ್ಥಿಯೊಬ್ಬ ಚಪ್ಪಲಿ ಎಸೆದಿದ್ದಾನೆ.
ಭಾನುವಾರ ಜಾಮಿಯಾ ನೀಮಿಯಾ ಸೆಮಿನರಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಷರೀಫ್ ಭಾಷಣ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿ ತಲ್ಹಾ ಮುನ್ನಾವರ್‌ ಎಂಬಾತ ಷರೀಫ್‌ ಮೇಲೆ ಚಪ್ಪಲಿ ಎಸೆದು ಅವರ ಎದುರು ಬಂದು ಜೋರಾಗಿ ಅವರ ವಿರುದ್ದ ಘೋಷಣೆ ಕೂಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಷರೀಫ್‌ ಮೇಲೆ ಚಪ್ಪಲಿ ಎಸೆದ ವಿದ್ಯಾರ್ಥಿ ಮೇಲೆ ಪಿಎಂಎಲ್‌ಎನ್‌ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ಷರೀಫ್ ತಮ್ಮ ಭಾಷಣವನ್ನು ಮೊಟಕುಗೊಳಿಸಿ ತೆರಳಿದ್ದಾಗಿ ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com