ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನ ಮೂವರಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು : ಮಾರ್ಚ್‌ 23ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಚುನಾವಣಾ ಅಧಿಕಾರಿ ಎಸ್‌. ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯ ಸಭಾ ಸದಸ್ಯ ಚಂದ್ರಶೇಖರ್‌, ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸಾಹಿತಿ. ಡಾ. ಎನ್‌ ಹನುಮಂತಯ್ಯ, ಡಾ. ಸಯ್ಯದ್‌ ನಾಸಿರ್‌ ಹುಸೇನ್‌ ಹಾಗೂ ಜಿ.ಸಿ ಚಂದ್ರಶೇಖರ್‌ ಈ ಮೂವರು ನಾಮಪತ್ರ ಸಲ್ಲಿಸಿದರು. ಈಗಾಗಲೆ ಜೆಡಿಎಸ್‌ನ ಅಭ್ಯರ್ಥಿಯಾಗಿ ಬಿ.ಎಂ ಫಾರೂಕ್‌ ನಾಮಪತ್ರ ಸಲ್ಲಿಸಿದ್ದಾರೆ.

ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ತಿಳಿದುಬಂದಿದೆ. ರಾಜ್ಯಸಭೆ ಸದಸ್ಯರಾದ ಕೆ. ರೆಹಮಾನ್‌ ಖಾನ್‌, ರಾಜೀವ್‌ ಚಂದ್ರಶೇಖರ್‌ ರಂಗಸಾಯಿ ರಾಮಕೃಷ್ಣ, ಬಸವರಾಜ ಪಾಟೀಲ್‌ ಏಪ್ರಿಲ್‌ 2ರಂದು ನಿವೃತ್ತಿಯಾಗುತ್ತಿದ್ದು, ಇದರಿಂದ ತೆರವಾಗುವ ಸ್ಥಾನಗಳಿಗೆ ಮಾರ್ಚ್‌ 23ರಂದು ಚುನಾವಣೆ ನಡೆಯಲಿದೆ.

Leave a Reply

Your email address will not be published.

Social Media Auto Publish Powered By : XYZScripts.com