ನೇಪಾಳದ ರಾಜಧಾನಿ ಕಾಠ್ಮಂಡುವಿನಲ್ಲಿ ವಿಮಾನ ಪತನ : 67 ಮಂದಿ ದುರ್ಮರಣ ?

ಕಾಠ್ಮಂಡು : ನೇಪಾಳದ  ಕಾಠ್ಮಂಡುವಿನಲ್ಲಿರುವ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪತನವಾಗಿದ್ದು, 67 ಮಂದಿ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ.

ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ವಿಮಾನದಲ್ಲಿದ್ದ ಇನ್ನು 13 ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇರುವುದಾಗಿ ಹೇಳಲಾಗುತ್ತಿದೆ.

ಈ ವಿಮಾನ ಢಾಕಾದಿಂದ ಅಮೆರಿಕಕ್ಕೆ ತೆರಳುತ್ತಿತ್ತು. ಈ ವೇಳೆ ವಿಮಾನ ಕಾಠ್ಮುಂಡುವಿಗೆ ಆಗಮಿಸಿ ಲ್ಯಾಂಡ್‌ ಆಗುತ್ತಿದ್ದು, ಈ ವೇಳೆ ಘಟನೆ ನಡೆದಿದೆ. ಘಟನೆ ನಡೆದ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

 

Leave a Reply

Your email address will not be published.