ಅನಂತ್ ಕುಮಾರ್ ಹೆಗಡೆ ವಿರುದ್ಧ ದಲಿತರಿಂದ ಬೌ ಬೌ, ಹಚ್ ಹಚ್ ಪ್ರತಿಭಟನೆ
ಬೆಳಗಾವಿ : ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸಚಿವ ಅನಂತ ಕುಮಾರ ವಿರುದ್ಧ ದಲಿತ ಸಂಘಟನೆಗಳಿಂದ ವಿಶಿಷ್ಠ ಬೌ ಬೌ , ಹಚ್ ಹಚ್ ಪ್ರತಿಭಟನೆ ನಡೆಸಲಾಯಿತು. ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರ ಎದುರು ಜಮಾಯಿಸಿದ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಅನಂತ ಕುಮಾರ ಹೆಗಡೆಯವರನ್ನ ನಾಯಿಗೆ ಹೋಲಿಸಿ ಹಚ್ ಹಚ್ ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕೋಡಿ ತಾಲೂಕಿನ ವಿವಿಧ ಕಾರ್ಯಕ್ರಮ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಹೆಗಡೆ ಭಾಗಿಯಾಗಲಿದ್ದಾರೆ ಎಂದು ಸುದ್ದಿ ತಿಳಿದು ಕಪ್ಪು ಬಾವುಟ ಪ್ರದರ್ಶನ ಮಾಡಲು ದಲಿತ ಸಂಘಟನೆಗಳ ಕಾರ್ಯಕರತರು ಮುಂದಾಗಿದ್ದರು. ಹೆಗಡೆ ಆಗಮಿಸುತ್ತಿಲ್ಲ ಎಂದು ತಿಳಿದು ಮೇಲೆ ಗೋ ಬ್ಯಾಕ್ , ಗೋ ಬ್ಯಾಕ್ ಅಂತಾ ಸಚಿವ ಹೆಗಡೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಸಂವಿಧಾನ ಬದಲಾಯಿಸಲು ನಾವು ಬಂದಿದ್ದು ಹಾಗೂ ಬೀದಿಯಲ್ಲಿ ಬೊಗಳುವ ನಾಯಿಗೆ ತಲೆ ಕೆಡಿಸಿಕೊಳಲ್ಲ ಎಂದು ಸಚಿವ ಹೆಗಡೆ ಕೆಲ ದಿನಗಳ ಹಿಂದೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಇನ್ನೂ ಈ ಸಂದರ್ಭದಲ್ಲಿ ನೈತಿಕತೆ ಇದ್ದರೆ ಸಚಿವ ಅನಂತಕುಮಾರ್ ಹೆಗಡೆ ರಾಜೀನಾಮೆ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.