Nidahas Trophy : ಲಂಕಾ ವಿರುದ್ಧ ಭಾರತಕ್ಕೆ ಜಯ : ಶಾರ್ದೂಲ್ ಠಾಕೂರ್ ಪಂದ್ಯಶ್ರೇಷ್ಟ

ಕೋಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ನಿದಾಹಾಸ್ ಟಿ20 ತ್ರಿಕೋನ ಸರಣಿಯ ಪಂದ್ಯದಲ್ಲಿ ಟೀಮ್ ಇಂಡಿಯಾ ಆತಿಥೇಯ ಶ್ರೀಲಂಕಾ ವಿರುದ್ಧ 6 ವಿಕೆಟ್ ಜಯ ಗಳಿಸಿದೆ.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆ ಅಡ್ಡಿ ಪಡಿಸಿದ್ದರಿಂದ ಪಂದ್ಯವನ್ನು 19 ಓವರುಗಳಿಗೆ ಸೀಮಿತಗೊಳಿಸಲಾಗಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ನಿಗದಿತ 19 ಓವರುಗಳಲ್ಲಿ 9 ವಿಕೆಟ್ ಕಳೆದುಕೊಂಡು 152 ರನ್ ಮೊತ್ತ ಕಲೆಹಾಕಿತು. ಮಿಂಚಿನ ದಾಳಿ ನಡೆಸಿದ ಶಾರ್ದೂಲ್ ಠಾಕೂರ್ 4 ವಿಕೆಟ್ ಪಡೆದರು.

ಗುರಿಯನ್ನು ಬೆನ್ನತ್ತಿದ ಭಾರತ 17.3 ಓವರುಗಳಲ್ಲಿ 4 ವಿಕೆಟ್ ಕಳೆದುಕೊಂಡು 153 ರನ್ ಸೇರಿಸಿ ಗೆಲುವಿನ ಗೆ ಬೀರಿತು. ಭಾರತದ ಮನೀಶ್ ಪಾಂಡೆ 42, ದಿನೇಶ್ ಕಾರ್ತಿಕ್ 39, ಸುರೇಶ್ ರೈನಾ 27 ರನ್ ಗಳಿಸಿದರು. 4 ವಿಕೆಟ್ ಪಡೆದ ಶಾರ್ದೂಲ್ ಠಾಕೂರ್ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರು.

 

Leave a Reply

Your email address will not be published.

Social Media Auto Publish Powered By : XYZScripts.com