ಸರ್ಕಾರಕ್ಕೆ ಮತ್ತೆ ಮುಖಭಂಗ : ಕೊಪ್ಪಳ SP ಅನೂಪ್‌ ಶೆಟ್ಟಿ ವರ್ಗಾವಣೆಗೂ CAT ತಡೆ

ಕೊಪ್ಪಳ : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಮುಖಭಂಗ ಅನುಭವಿಸಿದ್ದು. ಈಗ ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವರ್ಗಾವಣೆ ವಿಚಾರದಲ್ಲೂ ಟೀಕೆಗೆ ಗುರಿಯಾಗಿದೆ.

ತಮ್ಮನ್ನು ಧಿಡೀರನೆ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಎಸ್‌.ಪಿ ಅನೂಪ್‌ ಶೆಟ್ಟಿ, ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ)ಗೆ ಪತ್ರ ಬರೆದಿದ್ದರು. ಈಗ ಅನೂಪ್ ಶೆಟ್ಟಿ ವರ್ಗಾವಣೆಗೂ ಸಿಎಟಿ ತಡೆ ನೀಡಿದೆ.

ನಾನು ಕೆಲಸಕ್ಕೆ ಸೇರಿ ಇನ್ನೂ ಸರಿಯಾಗಿ ಎಂಟು ತಿಂಗಳು ಕಳೆದಿಲ್ಲ. ಆಗಲೇ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದು ನಿಯಮಬಾಹಿರ ಎಂದು ಅರ್ಜಿಯಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ವರ್ಗಾವಣೆಗೆ ತಡೆ ನೀಡಿದೆ.

ಕೊಪ್ಪಳಕ್ಕೆ ಆಗಮಿಸಿದ್ದ ಬಳಿಕ ಅನೂಪ್ ಅಕ್ರಮಗಳಿಗೆ ಕಡಿವಾಣ ಹಾಕಿ, ಜನರಿಂದ ಮೆಚ್ಚುಗೆ ಗಳಿಸಿದ್ದರು. ಈಗ ಸರ್ಕಾರ ಅವರನ್ನು ಬೆಂಗಳೂರಿನ ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅನೂಪ್‌ ಸಿಎಟಿಗೆ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com