ಸರಣಿ ಅಪಘಾತ : ಕರ್ನಾಟಕ ನೋಂದಣಿಯ ಕಾರಿನಲ್ಲಿದ್ದ ಐವರ ದುರ್ಮರಣ

ಚೆನ್ನೈ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿ ಘಟನೆ ನಡೆದಿದೆ.

ಕಾರು, ಬಸ್‌ ಹಾಗೂ ಲಾರಿಯ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿಗೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಅಲ್ಲದೆ ಕಾರು ಕರ್ನಾಟಕ ನೋಂದಣಿಯದ್ದಾಗಿರುವುದಾಗಿ ತಿಳಿದುಬಂದಿದೆ. ಮೃತದೇಹಗಳು ಕಾರಿನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ.

ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಸದ್ಯ ಮೃತದೇಹಗಳನ್ನ ಹೊಸೂರು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಹೊಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com