ನಟನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು : ಮೊಬೈಲ್‌, ದುಡ್ಡು ಕಿತ್ತು ಪರಾರಿ

ಬೆಂಗಳೂರು :ದುಷ್ಕರ್ಮಿಗಳ ತಂಡವೊಂದು ನಟನ ಮೇಲೆ ಹಲ್ಲೆ ಮಾಡಿ ಅವರ ಬಳಿ ಇದ್ದ ಹಣ, ಮೊಬೈಲ್‌ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಾಗವಲ್ಲಿ ವರ್ಸಸ್‌ ಆಪ್ತಮಿತ್ರರು ಚಿತ್ರದ ನಾಯಕ ಕಾರ್ತಿಕ್‌ ವಿಕ್ರಂ ತಮ್ಮ ಕಾರಿನಲ್ಲಿ ರಾತ್ರಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಎಂಟು ಮಂದಿ ದುಷ್ಕರ್ಮಿಗಳ ತಂಡ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಕಾರಿನಿಂದ ಕಾರ್ತಿಕ್‌ ವಿಕ್ರಂರನ್ನು ಹೊರಗೆಳೆದು ಹಲ್ಲೆ ಮಾಡಿ ಅವರ ಬಳಿ ಇದ್ದ 50 ಸಾವಿರ ಹಣ, ಒಂದು ಮೊಬೈಲ್‌ ಹಾಗೂ ಸ್ವಿಫ್ಟ್‌ ಕಾರನ್ನು ಕಸಿದು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಕಾರ್ತಿಕ್‌ರನ್ನು ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ತಿಕ್‌ ಕಿವಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸರಿಯಾಗಿ ಕಿವಿ ಕೇಳುತ್ತಿಲ್ಲ ಎಂದು ತಿಳಿದುಬಂದಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com