ಜೈಲಲ್ಲಿ ಕಂಬಿ ಎಣಿಸುತ್ತಿರುವ ನಲಪಾಡ್‌ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಬೆಂಗಳೂರು : ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿದ್ವತ್‌ ಮೇಲೆ ಹಲ್ಲೆ ಮಾಡಿ ಜಾಮೀನು ಸಿಗದೆ ಜೈಲೂಟ ತಿನ್ನುತ್ತಿರುವ ನಲಪಾಡ್‌ ಸರ್ಕಾರಿ ಭೂಮಿಯನ್ನು ಕಬಳಿಸಿರುವುದಾಗಿ ತಿಳಿದುಬಂದಿದ್ದು ಎಫ್‌ಐಆರ್‌ ದಾಖಲಾಗಿದೆ.

ಕೆಪಿಸಿಸಿ ಕಚೇರಿ ಬಳಿ ಇರುವ 3 ಎಕರೆ 29ಗುಂಟೆ ಸರ್ಕಾರದ ಆಸ್ತಿಯನ್ನು ಕಬಳಿಸಲು ನಲಪಾಡ್‌ ಮತ್ತು ಗ್ಯಾಂಗ್‌ ಯತ್ನಿಸಿದೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಈ ಸಂಬಂಧ ಬಿಬಿಎಂಪಿಯ ಬಿಎಂಟಿಎಫ್‌ನಲ್ಲಿ ಪ್ರಕರಣ ದಾಖಲಾಗಿದ್ದು, ನಲಪಾಡ್‌ಗೆ ಬಿಎಂಟಿಫ್‌ ನಿಂದ ನೋಟಿಸ್‌ ನೀಡಲಾಗಿದೆ. ಬಿಬಿಎಂಪಿಯ ಕಂದಾಯ ಅಧಿಕಾರಿ ಸೀತಾರಾಂ ಎಂಬುವವರು ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com