ಬೆಂಗಳೂರು ಪಶ್ಚಿಮ ವಿಭಾಗದ DCP ಯಾಗಿ ಅಧಿಕಾರ ಸ್ವೀಕರಿಸಿದ ರವಿ ಚೆನ್ನಣ್ಣನವರ್‌

ಬೆಂಗಳೂರು : ದಕ್ಷ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿರುವ ಐಪಿಎಸ್‌ ಅಧಿಕಾರಿ ರವಿ ಡಿ ಚೆನ್ನಣ್ಣನವರ್‌ ಇಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕೆಲ ದಿನಗಳ ಹಿಂದೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿತ್ತು.ಈಗ ಪಶ್ಚಿಮ ವಿಭಾಗದ ಡಿಸಿಪಿಯಾಗಿ ರವಿ ಚೆನ್ನಣ್ಣನವರ್‌ ಕಾರ್ಯನಿರ್ವಹಿಸಲಿದ್ದು, ಎನ್‌.ಎಂ ಅನುಚೇತನ್‌ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಇಂದು ಅನುಚೇತನ್‌ ಅವರಿಂದ ರವಿ ಚೆನ್ನಣ್ಣನವರ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಇವರು ಕಳೆದ ಒಂದೂವರೆ ವರ್ಷದಿಂದ ಮೈಸೂರು ಎಸ್‌ಪಿಯಾಗಿ  ಕಾರ್ಯನಿರ್ವಹಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com