NDA ಮೈತ್ರಿಕೂಟದಿಂದ ಹೊರನಡೆಯಲು TDP ನಿರ್ಧಾರ : ಕೇಂದ್ರದ ವಿರುದ್ಧ ನಾಯ್ಡು ಗುಡುಗು

ದೆಹಲಿ : ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಪಟ್ಟು ಹಿಡಿದಿದ್ದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಎನ್‌ಡಿಎ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದೆ.
ಗುರುವಾರ ಟಿಡಿಪಿ ಪಾಲಿಟ್‌ ಬ್ಯೂರೋ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಎನ್‌ಡಿಎ ಜೊತೆಗಿನ ಮೈತ್ರಿ ಕಡಿದುಕೊಳ್ಳಲು ನಿರ್ಧರಿಸಿದೆ. ಸಭೆಯ ವೇಳೆ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ ಚಂದ್ರಬಾಬು ನಾಯ್ಡು, ನಮ್ಮ ಪಕ್ಷ ಕೇಂದ್ರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಹೇಳಿದ್ದಾರೆ.
ಇಂದು ಸಂಜೆ ಆಂಧ್ರ ರಾಜಧಾನಿ ಅಮರಾವತಿಯಲ್ಲಿ ಟಿಡಿಪಿ ಕೇಂದ್ರ ಸಮಿತಿ ಸಭೆ ನಡೆಯಲಿದ್ದು, ಈ ವೇಳೆ ಸ್ಪಷ್ಟ ಚಿತ್ರಣ ಸಿಗಲಿದೆ.

Leave a Reply

Your email address will not be published.