JDS ವಿರುದ್ದ ಸಿಡಿದೆದ್ದಿರುವ ಸಪ್ತ ಬಂಡಾಯ ಶಾಸಕರ ಕಾಂಗ್ರೆಸ್‌ ಸೇರ್ಪಡೆಗೆ ಡೇಟ್‌ Fix ?

ಕೊಪ್ಪಳ : ಜೆಡಿಎಸ್ ವಿರುದ್ದ ಸಿಡಿದೆದ್ದಿರುವ ಸಪ್ತ ಬಂಡಾಯ ಶಾಸಕರು ಕಾಂಗ್ರೆಸ್ ಪಕ್ಷ ಸೇರುವ ಡೇಟ್ ಫಿಕ್ಸ್ ಆಗಿದ್ದು, ಭರ್ಜರಿ ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಅವರ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಗೊಳಿಸಿದೆ.

ಈ ಬಗ್ಗೆ ಸ್ವತಃ ಇಕ್ಬಾಲ್ ಅನ್ಸಾರಿ ಪ್ರತಿಕ್ರಿಯೆ ನೀಡಿದ್ದು, ಮೈಸೂರಿನಲ್ಲಿ ಇದೇ 25 ರಂದು ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಈ ಸಂಧರ್ಭದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸುವ ಯೋಚನೆ ನಡೆಯುತ್ತಿದೆ. ಇದರ ಬಗ್ಗೆ ಶಾಸಕರಾದ ಜಮೀರ್ ಅಹ್ಮದ್ ದಿನಾಂಕ ನಿಗಧಿಗೊಳಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ನಾವೆಲ್ಲರೂ ಮಾನಸಿಕವಾಗಿ ಕಾಂಗ್ರೆಸ್‌ನಲ್ಲೇ ಇದ್ದೇವೆ. ಪಕ್ಷದ ಸಂಘಟನೆ ಮಾಡುತ್ತಿದ್ದೇವೆ. ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್, ಡಿ,ಕೆ ಶಿವಕುಮಾರ್ ಸಹ ನಿಮಗೆ ಟಿಕೆಟ್ ಎಂದಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಯಾರೇ ಆಕಾಂಕ್ಷಿಗಳಿದ್ದರೂ  ಟಿಕೆಟ್‌ ಮಾತ್ರ ನಮಗೆ ಸಿಗುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published.