ತಜ್ಞರ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಡಿ : CM ಗೆ ವೀರಶೈವ ಸ್ವಾಮೀಜಿಗಳ ಮನವಿ

ಬೆಂಗಳೂರು : ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಸಂಬಂಧಿಸಿದಂತೆ ವೀರಶೈವ ಸ್ವಾಮೀಜಿಗಳು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ವರದಿಯನ್ನು ಅಂಗೀಕರಿಸದಂತೆ ಮನವಿ ಸಲ್ಲಿಸಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವೀರಶೈವ -ಲಿಂಗಾಯಿತ ಎರಡೂ ಒಂದೇ. ತಜ್ಞರೇ ಸಮಿತಿಯೇ ಸರಿಯಾಗಿ ರಚನೆಯಾಗಿಲ್ಲ. ಸರ್ಕಾರ ಸಮಿತಿಯ ಶಿಫಾರಸ್ಸು ತಿರಸ್ಕರಿಸಬೇಕು. ಅವಶ್ಯಕತೆ ಇದ್ದರೆ ಮತ್ತೊಂದು ಸಮಿತಿ ಮಾಡಿ. ಎರಡೂ ಕಡೆಯ ಮುಖಂಡರನ್ನು ಸಮಿತಿಗೆ ಸೇರಿಸಿ ವರದಿ ಸಿದ್ಧಪಡಿಸುವಂತೆ ಸೂಚಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com