ವೀರಪ್ಪ ಮೊಯ್ಲಿ Tweet ವಿವಾದ : ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತಾಪ್ ಸಿಂಹ ಟಾಂಗ್‌

ಮೈಸೂರು : ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಹಣದ ರಾಜಕೀಯ ನಡೆಯುತ್ತಿದೆ. ಅಭ್ಯರ್ಥಿಗಳ ಆಯ್ಕೆಗೆ ಹಣ ಬಲವನ್ನು ಬಳಕೆ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರ ಟ್ವೀಟ್‌ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿರುವ ಪ್ರತಾಪ್‌ ಸಿಂಹ, ವೀರಪ್ಪ ಮೊಯ್ಲಿ ಹೇಳಿಕೆಯಲ್ಲಿ ಸತ್ಯಾಂಶವಿದೆ. ಸೀದಾ ರೂಪಾಯಿ ಸರ್ಕಾರದ ವಿರುದ್ಧದ ಆರೋಪಕ್ಕೆ ಕಾಂಗ್ರೆಸ್‌ ನಾಯಕರೇ ಆದ ವೀರಪ್ಪ ಮೊಯ್ಲಿ ದಾಖಲೆ ನೀಡಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಅವರೇ ಮಾತನಾಡಿರುವುದಾಗಿ ಹೇಳಿದ್ದಾರೆ.
ರಾಜಕೀಯದಲ್ಲಿ ಹಣದ ಸಮಸ್ಯೆಯನ್ನು ಕಾಂಗ್ರೆಸ್‌ ಬಗೆಹರಿಸಿಕೊಳ್ಳಬೇಕಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಬೇಕು ಎಂಬುದು ಹಣದಿಂದ ನಿರ್ಧರಿತವಾಗುತ್ತಿದೆ ಎಂದು ಮೊಯ್ಲಿ ಟ್ವೀಟ್ ಮಾಡಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com