ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ವಿಡಿಯೋ ಮಾಡಿದ್ರು… ಆಮೇಲೆ….?

ಲಖನೌ : ಉತ್ತರ ಪ್ರದೇಶದಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 20 ವರ್ಷದ ಯುವತಿಯ ಮೇಲೆ ಕಾಮಾಂಧರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅದರ ವಿಡಿಯೋ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಾರೆ.
ಮಾರ್ಚ್‌ 11 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವತಿ ಕೆಲಸ ಮುಗಿಸಿ ಮದ್ಯಾಹ್ನ 3 ಗಂಟೆಯ ಸುಮಾರಿಗೆ ಮನೆಗೆ ಬರುತ್ತಿದ್ದು, ಆಕೆಯನ್ನು ಕಾಮುಕರು ಅಪಹರಿಸಿ ಕಬ್ಬಿನ ಗದ್ದೆಗೆ ಕರೆದೊಯ್ದಿದ್ದಾರೆ. ಬಳಿಕ ಆಕೆಯ ಮೇಲೆ ಐವರು ಅತ್ಯಾಚಾರವೆಸಗಿದ್ದು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿದ್ದಾರೆ.
ಘಟನೆ ಕುರಿತು ಎಲ್ಲಾದರೂ ಬಾಯಿ ಬಿಟ್ಟರೆ ವಿಡಿಯೋವನ್ನು ಎಲ್ಲೆಡೆ ಶೇರ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದು, ಯುವತಿ ವಿಚಾರವನ್ನು ಬಾಯ್ಬಿಡುವ ಮುನ್ನವೇ ವಿಡಿಯೋ ವೈರಲ್‌ ಆಗಿದೆ. ಬಳಿಕ ಯುತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com