ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಬಳಿಕ ಕಾರ್ತಿಕ್ ಟ್ವೀಟ್ : DK ಹೇಳಿದ್ದೇನು..?

ಕೋಲಂಬೋದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ರೋಚಕ 4 ವಿಕೆಟ್ ಜಯ ಸಾಧಿಸಿದ ಭಾರತ ನಿದಾಹಾಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಟೀಮ್ ಇಂಡಿಯಾದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು.

8 ಎಸೆತಗಳಲ್ಲಿ 29 ರನ್ ಗಳಿಸಿದ ಕಾರ್ತಿಕ್ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕೊನೆಯ ಎಸೆತದಲ್ಲಿ ಗೆಲ್ಲಲು 5 ರನ್ ಅಗತ್ಯವಿದ್ದಾಗ ಬಾಂಗ್ಲಾದೇಶದ ಸೌಮ್ಯ ಸರ್ಕಾರ್ ಎಸೆತದಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ಜಯ ತಂದಿತ್ತರು.

ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದ ದಿನೇಶ್ ಕಾರ್ತಿಕ್ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ‘ ಬಹುಶಃ ನನ್ನ ಜೀವನದ ಅತ್ಯುತ್ತಮ ರಾತ್ರಿಗಳಲ್ಲಿ ಇದು ಒಂದಾಗಿದೆ. ದೇಶಕ್ಕಾಗಿ ಪಂದ್ಯ ಗೆಲ್ಲಿಸುವ ಸಂತಸವನ್ನು ಯಾವುದೂ ಮೀರಿಸಲಾರದು ‘ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com