ಶಿಕ್ಷಕನಿಂದಲೇ ವಿದ್ಯಾರ್ಥಿ ಮೇಲೆ ಅತ್ಯಾಚಾರ : ಆತ್ಮಹತ್ಯೆಗೆ ಶರಣಾದ ಬಾಲಕಿ

ದೆಹಲಿ : 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ಹಿನ್ನೆಲೆಯಲ್ಲಿ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯ ಮೂಯೂರ್‌ ವಿಹಾರ್‌ ಶಾಲೆಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರು ಹಾಗೂ ಪ್ರಾಂಶುಪಾಲರ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ನೊಯ್ಡಾದ ನಿವಾಸಿಯಾಗಿದ್ದ ವಿದ್ಯಾರ್ಥಿನಿ ನೃತ್ಯಪಟುವಾಗಿದ್ದಳು. ಶಾಲೆಯ ಶಿಕ್ಷಕನೊಬ್ಬ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಯಾರಿಗಾದರೂ ಹೇಳಿದರೆ ಪರೀಕ್ಷೆಯಲ್ಲಿ ಫೇಲ್‌  ಮಾಡುವುದಾಗಿ ಬೆದರಿಕೆಯೊಡ್ಡಿದ್ದ. ಅಲ್ಲದೆ ಆತ ವಿದ್ಯಾರ್ಥಿನಿಯನ್ನು ಪರೀಕ್ಷೆಯೊಂದರಲ್ಲಿ ಫೇಲ್ ಮಾಡಿದ್ದ. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ.

ಮಾರ್ಚ್‌ 16ರಂದು ಶಾಲೆಯ ಫಲಿತಾಂಥ ಪ್ರಕಟವಾಗಿತ್ತು. ಎರಡು ವಿಷಯಗಳಲ್ಲಿ ವಿದ್ಯಾರ್ಥಿನಿ ಫೇಲ್ ಆಗಿದ್ದಳು. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಸದ್ಯ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ದೌರಜನ್ಯ ತಡೆ ಕಾಯಿದೆ ಹಾಗೂ ಐಪಿಸಿ ಸೆ.306 ಹಾಗೂ 506ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com