ಕೈ, JDS ಬಿಟ್ಟು ಕಮಲ ಹಿಡಿದ ಕಾಂಗ್ರೆಸ್‌ ಉಚ್ಛಾಟಿತ ನಾಯಕ A.S ನಡಹಳ್ಳಿ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆಯಾಗಿದ್ದ ದೇವರ ಹಿಪ್ಪರಗಿ ಶಾಸಕ ಎ.ಎಸ್‌ ನಡಹಳ್ಳಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡ ಬಳಿಕ ನಡಹಳ್ಳಿ, ಜೆಡಿಎಸ್‌ನಿಂದ ಗುರುತಿಸಿಕೊಂಡಿದ್ದರು. ಅವರಿಗೆ ಜೆಡಿಎಸ್‌ನಿಂದ ಟಿಕೆಟ್ ನೀಡುವುದಾಗಿ ಹೇಳಲಾಗಿತ್ತಾದರೂ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.


ನಡಹಳ್ಳಿ ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಯಡಿಯೂರಪ್ಪ, ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದವರಿಗೆ ನಾವು ಎಂದಿಗೂ ಸ್ವಾಗತಿಸುತ್ತೇವೆ. ನಮ್ಮ ಪಕ್ಷದಿಂದ ಅವರಿಗೆ ಟಿಕೆಟ್ ನೀಡುವುದ ಖಚಿತ. ಇದನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ನಡಹಳ್ಳಿ, ಜೆಡಿಎಸ್‌ಗಾಗಿ ಕೆಲಸ ಮಾಡಿದ್ದು ನಿಜ. ಕುಮಾರಸ್ವಾಮಿಯವರನ್ನು ದೇವರಹಿಪ್ಪರಗಿಯಿಂದ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬೇಕು ಎಂದು ಕೊಂಡಿದ್ದೆ. ಆದರೆ ಟಿಕೆಟ್‌ ಹಂಚಿಕೆಯಲ್ಲಿ ಗೊಂದಲವಾದ ಹಿನ್ನೆಲೆಯಲ್ಲಿ ಬಿಜೆಪಿ ಸೇರುತ್ತಿರುವುದಾಗಿ ಹೇಳಿದ್ದಾರೆ.
ದೇವರಹಿಪ್ಪರಗಿ ನಾನು ಕಟ್ಟಿದ ಮನೆ. ನನ್ನ ಮನೆಯನ್ನು ಬೇರೆಯವರಿಗೆ ಬಿಟ್ಟು ಕೊಡಲು ಸಾಧ್ಯವಾ. ನನ್ನ ಪತ್ನಿ ಯಾಕೆ ನಿಲ್ಲಬಾರದು. ಪತ್ನಿ ನಿಲ್ಲುವುದಾಗಿ ಹೇಳಿದ್ದಕ್ಕೆ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಾಗಿತ್ತು. ಆದ್ದರಿಂದ ಜೆಡಿಎಸ್‌ ತೊರೆದಿದ್ದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com