ನಲಪಾಡ್‌ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್‌ಗೆ ಕೇವಿಯಟ್‌ ಸಲ್ಲಿಸಿದ ಸರ್ಕಾರ

ದೆಹಲಿ : ಉದ್ಯಮಿ ಲೋಕನಾಥ್ ಪುತ್ರ ವಿದ್ವತ್‌ ಮೇಲೆ ಹಲ್ಲೆ ನಡೆಸಿದ್ದ ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ಗೆ ಜಾಮೀನು ಸಿಗದಂತೆ ಮಾಡಲು ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ಕೇವಿಯಟ್‌ ಸಲ್ಲಿಸಿದೆ.
ಪ್ರಕರಣ ಸಂಬಂದ ನಲಪಾಡ್‌ ಹಾಗೂ ಆತನ ಬೆಂಬಲಿಗರಿಗೆ ಜಾಮೀನು ಸಿಗದಿರಲು ರಾಜ್ಯದ ವಕೀಲ ಸಂಜಯ್ ನೂಲಿ ಅವರು ಕೇವಿಯಟ್‌ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಫೆಬ್ರವರಿಯಲ್ಲಿ ಮಹಮ್ಮದ್ ನಲಪಾಡ್ ಹಾಗೂ ಆತನ ಸ್ನೇಹಿತರು ಯು ಬಿ ಸಿಟಿಯ ಘರ್ಜಿ ಕೆಫೆಯಲ್ಲಿ ವಿದ್ವತ್‌ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಎಲ್ಲಾ ಆರೋಪಿಗಳ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿತ್ತು. ಬಳಿಕ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಲಪಾಡ್ ಹೈಕೋರ್ಟ್‌ ಮೊರೆ ಹೋಗಿದ್ದನು. ಆದರೆ ಹೈಕೋರ್ಟ್‌ನಲ್ಲೂ ಜಾಮೀನು ಸಿಗದ ಹಿನ್ನೆಲೆಯಲ್ಲಿ ಈಗ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಅಲ್ಲಿಯೂ ಜಾಮೀನು ಸಿಗುವ ಸೂಚನೆ ಸಿಗುತ್ತಿಲ್ಲ.

Leave a Reply

Your email address will not be published.

Social Media Auto Publish Powered By : XYZScripts.com