ಶಾರದಾಂಬೆಯ ಸನ್ನಿಧಿಗೆ ರಾಹುಲ್‌ ಗಾಂಧಿ ಭೇಟಿ : ಜಗದ್ಗುರುಗಳ ಜೊತೆ ಮಾತುಕತೆ

ಶೃಂಗೇರಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಇಂದು ಶೃಂಗೇರಿ ಶಾರದಾಂಬೆಯ ಸನ್ನಿಧಿಗೆ ತೆರಳಿದ್ದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಾಂಪ್ರದಾಯಿಕ ಪಂಚೆ, ಶಲ್ಯ ಧಿರಿಸಿನಲ್ಲಿ ಶಾರದಾಂಬೆಯ ದರ್ಶನ ಪಡೆದ ರಾಹುಲ್‌ ಗಾಂಧಿ, ಬಳಿಕ ಮಠದ ಜಗದ್ಗುರುಗಳಾದ ಭಾರತೀ ತೀರ್ಥ ಮಹಾಸ್ವಾಮಿಗಳ ಆಶಿರ್ವಾದ ಪಡೆದಿದ್ದಾರೆ.

ರಾಹುಲ್‌ ಗಾಂಧಿಗೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಕೆಲ ಪ್ರಮುಖ ಗಣ್ಯರು ಹಾಜರಿದ್ದರು.
ಗುರುಗಳ ಜೊತೆ ಆಧ್ಯಾತ್ಮ ವಿಚಾರವಾಗಿ ಕೆಲ ಕಾಲ ಚರ್ಚೆ ನಡೆಸಿದ್ದು, ಬಳಿಕ ವೇದ ಪಾಠಶಾಲೆಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.
ರಾಹುಲ್‌ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿದ್ದು, ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

Leave a Reply

Your email address will not be published.